ನವದೆಹಲಿ: ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಜೈಲುಶಿಕ್ಷೆಗೆ ಒಳಗಾಗಿದ್ದ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ದ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಗೆ ಕಡೆಗೂ ಜಾಮೀನು ಮಂಜೂರಾಗಿದೆ. ಜಾರ್ಖಂಡ್ ಹೈಕೋರ್ಟ್ ಶನಿವಾರ(ಏ.17) ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಜಾರ್ಖಂಡ್(ಹಿಂದಿನ ಬಿಹಾರ) ನಗರದಲ್ಲಿನ ಖಜಾನೆಯಿಂದ 3.13 ಕೋಟಿ ರೂಪಾಯಿ ತೆಗೆದ ಪ್ರಕರಣದಲ್ಲಿ ಲಾಲು ಪ್ರಸಾದ್ ದೋಷಿಯಾಗಿದ್ದರು. ಇದೇ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿದ್ದರು.
2021ರ ಫೆಬ್ರುವರಿ 19ರಂದು ಲಾಲುಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಕಾನೂನು ಬಾಹಿರವಾಗಿ ಡುಮ್ಕಾ ಖಜಾನೆಯಿಂದ 3.13 ಕೋಟಿ ಹಣವನ್ನು ವಿತ್ ಡ್ರಾ ಮಾಡಿದ ಪ್ರಕರಣದಲ್ಲಿ ಕೋರ್ಟ್ ಏಳು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು.