ಪ.ಜಾತಿ-ಪ. ಪಂಗಡದ ಪದಕ ವಿಜೇತ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಜಿಲ್ಲೆಯಲ್ಲಿ
2021 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಅರ್ಹ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ. 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ದೂರವಾಣಿ ಸಂಖ್ಯೆ: 0820-2521324, ಮೊ. ಸಂಖ್ಯೆ: 9480886467 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.