ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಡುಪಿ ಜಿಲ್ಲಾ ಪೊಲೀಸರಿಗೆ ಬೋಲೇರೋ ವಾಹನವನ್ನು ಕೊಡುಗೆಯಾಗಿ ಹಸ್ತಾಂತರ ಮಾಡಿದೆ. ಉಡುಪಿ ಎಸ್‌ಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿ, ಎಸ್ ಪಿ ಹರಿರಾಮ್ ಶಂಕರ್ ಅವರಿಗೆ ಕೀಲಿ ಕೈ ಹಸ್ತಾಂತರ ಮಾಡಿದರು.
ಪೊಲೀಸ್ ಇಲಾಖೆ ಹಲವಾರು ವಾಹನಗಳು 15 ವರ್ಷವನ್ನು ಪೂರೈಸಿದ್ದು, ಕೆಲ ವಾಹನಗಳು ದುರಸ್ತಿಯಲ್ಲಿ ಇರುವುದರಿಂದ ಇಲಾಖೆಗೆ ಕರ್ತವ್ಯ ನಿರ್ವಹಿಸಲು ಸಮಸ್ಯೆ ಆಗುತ್ತಿತ್ತು. ಎಸ್ ಸಿಡಿಸಿಸಿ ಬ್ಯಾಂಕ್ ಸಿಎಸ್ಆರ್ ಫಂಡ್ ಮೂಲಕ ವಾಹನ ಒದಗಿಸಲು ಇಲಾಖೆ ಮನವಿ ಸಲ್ಲಿಸಿತ್ತು. ಪೊಲೀಸ್ ಇಲಾಖೆ ಬ್ಯಾಂಕ್ ಅಧ್ಯಕ್ಷರಿಗೆ ಸನ್ಮಾನಿಸಿ ಧನ್ಯವಾದ ಸಲ್ಲಿಸಿತು. ಬ್ಯಾಂಕ್ ಪೊಲೀಸ್ ಇಲಾಖೆಗೆ ಗೌರವ ಸ್ಮರಣಿಕೆ ನೀಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ ಎನ್ ರಾಜೇಂದ್ರಕುಮಾರ್, ರಾಜ್ಯ ಸರ್ಕಾರದ ಇಲಾಖೆಗಳಲ್ಲೇ ಪೊಲೀಸ್ ಇಲಾಖೆ ಬಹಳಷ್ಟು ಸವಾಲುಗಳನ್ನು ಎದುರಿಸಿಕೊಂಡು ಕೆಲಸ ಮಾಡುತ್ತದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸ್ ಇಲಾಖೆಯ ದೊಡ್ಡ ಜವಾಬ್ದಾರಿ. ಮನವಿ ಬಂದಾಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನಮ್ಮ ಬ್ಯಾಂಕ್ ಸ್ಪಂದಿಸಿ ವಾಹನವನ್ನು ಒದಗಿಸಿದೆ. ಉಡುಪಿಯ ಮನವಿಯನ್ನು ಬಹಳ ಸಂತಸದಿಂದ ನಾವು ಒಪ್ಪಿಕೊಂಡೆವು ಎಂದರು. ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಡಿವೈಎಸ್ ಪಿ ಡಿ.ಟಿ ಪ್ರಭು, ಬ್ಯಾಂಕ್ ಮತ್ತು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಬೈಟ್- ಡಾ. ಎಂಎನ್ ರಾಜೇಂದ್ರ ಕುಮಾರ್, ಅಧ್ಯಕ್ಷರು ಎಸ್ ಸಿಡಿಸಿಸಿ ಬ್ಯಾಂಕ್

















