ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯಲ್ಲಿ ದೇಶದ ಬ್ಯಾಂಕಿಂಗ್ ಇತಿಹಾಸದಲ್ಲಿಯೇ ಪ್ರಥಮ ಆವಿಷ್ಕಾರವಾದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನಿಂದ ಪರಿಚಯಿಸಲ್ಪಟ್ಟ ಮೊಬೈಲ್ ಬ್ಯಾಂಕ್ ಘಟಕ ಕಾರ್ಯಾರಂಭಿಸಿದೆ.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಬ್ಯಾಂಕಿನ ಸಾಧನೆ ಮತ್ತು ಮೊಬೈಲ್ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಮೊಬೈಲ್ ಬ್ಯಾಂಕಿನ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಉಡುಪಿ ಲೀಡ್ ಬ್ಯಾಂಕ್ ನ ಚೀಫ್ ಮ್ಯಾನೇಜರ್ ಪಿ. ಎಂ. ಪಿಂಜಾರ್ , ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಗ್ರಾಹಕ ಸ್ನೇಹಿ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಗ್ರಾಮೀಣ ಭಾಗದ ಜನರಿಗೆ ಮೊಬೈಲ್ ಬ್ಯಾಂಕ್ ಮೂಲಕ ಸೇವೆ ನೀಡುವುದನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನವೋದಯ ಸ್ವಸಹಾಯ ಗುಂಪಿನ ಸದಸ್ಯರಿಗೆ ಸಮವಸ್ತ್ರವನ್ನು ವಿತರಿಸಲಾಯಿತು.
ಬ್ಯಾಂಕಿನ ನಿರ್ದೇಶಕ ಬಿ. ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಸ್ಥಳೀಯ ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ಉಡುಪಿ ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉದ್ಯಮಿ ರಾಧಾಕೃಷ್ಣ ಶೆಟ್ಟಿ , ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬ್ಯಾಂಕಿನ ಎ.ಜಿ.ಎಂ. ನಿತ್ಯಾನಂದ ಸೇರಿಗಾರ್ ಸ್ವಾಗತಿಸಿದರು. ಉಡುಪಿ ಶಾಖೆಯ ವ್ಯವಸ್ಥಾಪಕ ಸುನೀಲ್ ಕುಮಾರ್ ಎಸ್. ವಂದಿಸಿದರು. ಬ್ರಹ್ಮಾವರ ಶಾಖೆಯ ವ್ಯವಸ್ಥಾಪಕ ವರದರಾಜ ಶೆಟ್ಟಿ ನಿರೂಪಿಸಿದರು.