ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ
ಸಮುದಾಯದ ವಿದ್ಯಾರ್ಥಿಗಳು ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಜಿ ವ್ಯಾಸಂಗ ಮಾಡಲು ಅನುಕೂಲವಾಗುವಾಗುವಂತೆ ವಿದ್ಯಾರ್ಥಿ ವೇತನ ಸೌಲಭ್ಯ ಪಡೆಯಲು http://103.138.196.8/nos ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್ https://dom.karnataka.gov.in ಅಥವಾ ಸಹಾಯವಾಣೆ ಸಂಖ್ಯೆ: 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆಲೋಶಿಪ್ ಸೌಲಭ್ಯ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಂ.ಫಿಲ್ ಹಾಗೂ ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಪ್ ಸೌಲಭ್ಯಕ್ಕೆ ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ರಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.