ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ

ಉಡುಪಿ: ಕರ್ನಾಟಕ ಸರಕಾರ ಮತ್ತು ಭಾರತ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.

1ನೇ ತರಗತಿಯಿಂದ 10ನೇ ತರಗತಿಯವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆನ್‍ಲೈನ್ ಮೂಲಕ  ಸಲ್ಲಿಸಬೇಕು. ವಿದ್ಯಾರ್ಥಿಯ ಪಾಲಕರ ವಾರ್ಷಿಕ ಆದಾಯ 1 ಲಕ್ಷ ರೂ ಒಳಗಿರಬೇಕು ಹಾಗೂ ಹೊಸ/ನವೀಕೃತ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿರುತ್ತದೆ.

ದಾಖಲೆಗಳು ಏನ್ ಬೇಕು?

ಅಂಕಪಟ್ಟಿ (ಹಿಂದಿನ ಸಾಲಿನ ವಾರ್ಷಿಕ ಅಂಕಪಟ್ಟಿ), ಪ್ರಸಕ್ತ ಸಾಲಿನ ಶುಲ್ಕ ಪಾವತಿಯ ರಶೀದಿ ಪ್ರತಿ (ಬೋಧನ ಹಾಗೂ ಪ್ರವೇಶ ಶುಲ್ಕ ಪ್ರತ್ಯೇಕವಾಗಿ ನಮೋದಿಸತಕ್ಕದ್ದು), ತಹಶೀಲ್ದಾರ್‍ರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಸೈಜಿನ ಒಂದು ಭಾವಚಿತ್ರ.

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರಿಂಟ್ ಪ್ರತಿಯನ್ನು ನಮೂದಿಸಿದ ಎಲ್ಲಾ ದಾಖಲೆಯೊಂದಿಗೆ 2 ಪ್ರತಿಯನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳಿಂದ ಸ್ವೀಕರಿಸಿದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಪರಿಶೀಲಿಸುವುದು.

ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಉಡುಪಿ ತಾಲೂಕು ದೂರವಾಣಿ ಸಂಖ್ಯೆ: 0820-2574596, ಕುಂದಾಪುರ ತಾಲೂಕು, ದೂರವಾಣಿ ಸಂಖ್ಯೆ : 08254-230370, ಕಾರ್ಕಳ ತಾಲೂಕು ದೂರವಾಣಿ ಸಂಖ್ಯೆ : 08258-231101 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.