ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದರಿಂದ ದ್ವಿತೀಯ ಪಿ.ಯು.ಸಿ ವರೆಗೆ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಮಾಜಿ ಸೈನಿಕರ ಹಾಗೂ ರಾಜ್ಯದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆ.ಓ.ಸಿ ಹಾಗೂ ಪ್ರೋಪೆಷನ್ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುವ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.