ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬoಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ಲಿಂಕ್‌ನಲ್ಲಿ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ ಹಾಗೂ ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ

















