ಪೆರ್ಡೂರು: ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಘಟನೆ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಕೃಷ್ಣಮೂರ್ತಿ ಎಂಬ ಶಿಕ್ಷಕ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲೆಮಲಗಿದ್ದಾರೆ. ಮಕ್ಕಳಿಗೆ ಪಾಠ ಹೇಳಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಮಾಡಬೇಕಾಗಿರುವ ಶಿಕ್ಷಕರೇ ಕಂಠಪೂರ್ತಿ ಕುಡಿದು ಮಲಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವು ಪೂಜಾರಿ, ಉಪಾಧ್ಯಕ್ಷೆ ಚೇತನಾ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ ತುಕಾರಾಮ ನಾಯಕ್ , ರಮೇಶ್ ಪೂಜಾರಿ, ಶಾಲಾಭಿವೃದ್ಧಿ ಸಮಿತಿ, ಬೈದಶ್ರೀ ಫ್ರೆಂಡ್ಸ್ ನ ಸತೀಶ್, ಗ್ರಾಮಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದು, ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವಿ ಸಲ್ಲಿಸಿದ್ದಾರೆ.