ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿಚಾರ ಸಂಕಿರಣ

ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವೈದ್ಯಕೀಯ ಯಂತ್ರಗಳು (ಮೆಡಿಕಲ್ ಡಿವೈಸಸ್) ಮತ್ತು ಅವುಗಳ ಬಳಕೆಯ ಕುರಿತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ನಡೆಯಿತು.
ಯುಎಸ್‌ಎಯ ಬೆಕ್ಟಾನ್ ಡಿಕ್ಕಿನ್ಸನ್ ವಿಶ್ವವಿದ್ಯಾನಿಲಯದ ಸಂಶೋಧನೆ ಮತ್ತು ಅಭಿವೃದ್ಧಿ ಸಂಶೋಧಕರಾದ ಬಾಲಚಂದ್ರ ನೀರಾಜೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ತಂತ್ರಜ್ಞಾನದಲ್ಲಿನ ನೂತನ ಬದಲಾವಣಿಗಳ ಕುರಿತು ಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲಾಗಿರುವ ಅಭಿವೃದ್ದಿಯ ಕುರಿತು ಪಿಪಿಟಿ ಮೂಲಕ ಮಾಹಿತಿಯನ್ನು ನೀಡಿದರು.
ಕಾರ್‍ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಕಾರ್ಯಕ್ರಮ ಸಂಯೋಜಕ ಟಿ.ಎಂ ಆನಂದ್, ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಎ ಕೋಟ್ಯಾನ್ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.