ಉಡುಪಿ: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣ ಹಾಗೂ ಬಳಿಕ ನಡೆದ ಪ್ರತಿಭಟನೆಗಳ ಹಿಂದೆ ಎಸ್ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕೈವಾಡ ಇದೆ. ಈ ಸಂಘಟನೆಗಳು ದೊಡ್ಡಮಟ್ಟದ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದವು ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಎರಡು ಸಂಘಟನೆಗಳು ಹತ್ರಾಸ್ ಪ್ರಕರಣವನ್ನು ಮುಂದಿಟ್ಟುಕೊಂಡು ಗಲಭೆ ನಡೆಸಲು ಸಂಚು ರೂಪಿಸಿರುವ ಬಗ್ಗೆ ಸರಕಾರಕ್ಕೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ಸಂಘಟನೆಗಳನ್ನು ದೇಶದಿಂದ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.