ಮಂಗಳೂರು: ಲಾಕ್ ಡೌನ್ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬಾಯಿಯಿಂದ ಎರಡನೇ ವಿಮಾನ ಸೋಮವಾರ ರಾತ್ರಿ ಬಂದಿಳಿಯಿತು.
ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಸುಮಾರು 178 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ಸಂಜೆ 7.55 ಕ್ಕೆ ಲ್ಯಾಂಡ್ ಆಯಿತು.
ಪ್ರಯಾಣಿಕರಿಗೆ ಇಳಿದ ನಂತರ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು.
ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪ್ರಯಾಣಿಕರಿಗೆ ಸ್ಟಾಂಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆ ನಡೆಸಲಾಯಿತು. ಪ್ರಯಾಣಿಕರಿಗೆ ಊಟದ ವ್ಯವಸ್ಥೆಯನ್ನೂ ಏರ್ಪಡಿಸಲಾಗಿದೆ.
ವಿಮಾನ ಆಗಮನ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಪ್ರಯಾಣಿಕರನ್ನು ನಿಗದಿತ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತ ಬಸ್ಸಿನಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.