ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಯಥಾಪ್ರಕಾರ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಉತ್ತೀರ್ಣ ಪ್ರಮಾಣ ಬಾಲಕಿಯರದ್ದು ಶೇ.68.72 ಆಗಿದ್ದರೆ, ಶೇ.55.22 ಬಾಲಕರು ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ದ್ವಿತೀಯ ಪಿಯು ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌‌ನಲ್ಲಿ karresults.nic.In ನೋಡಬಹುದು.