ತಿಪಟೂರು: ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು ಸುಸೂತ್ರವಾಗಿ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ತ್ತು ಸಾಕ್ಷರತಾ ಇಲಾಖೆ ಸಚಿವ ನಾಗೇಶ್ ಅವರು ತಿಳಿಸಿದ್ದಾರೆ. ರಾಜ್ಯದ 1109 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಈ ಸಂಬಂಧ ಅಗತ್ಯ ಇರುವ ಎಲ್ಲ ಸಿದ್ದತೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಮೇ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ. ತಿಪಟೂರಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಬಳಿಕ ನಾಗೇಶ್ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾರೆ.