ದ್ವಿತೀಯ ಪಿಯುಸಿ ಮರುಮೌಲ್ಯಮಾಪನ: ಹೆಬ್ರಿ‌ ಎಸ್‌.ಆರ್. ಕಾಲೇಜಿನ ವಿದ್ಯಾರ್ಥಿನಿ ರಾಜ್ಯಕ್ಕೆ 9ನೇ ರ್ಯಾಂಕ್

ಹೆಬ್ರಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಎಸ್ ಆರ್ ಪದವಿಪೂರ್ವ ಕಾಲೇಜಿನ ಖಾಝೀ ಇಲ್ಹಾಮ್ 592 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದು, ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿನಿಯನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.