ಉಡುಪಿ ಜೂನ್ 11: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಪ್ರಯುಕ್ತ, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳನ್ನು, ಕೋವಿಡ್-19 ಪ್ರಯುಕ್ತ ಕ್ವಾರಂಟೈನ್ ಗೆ ಬಳಸಿದ್ದಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಅಂತಹ ಕೇಂದ್ರಗಳನ್ನು ಸಂಪೂರ್ಣ ಸ್ವಾನಿಟೈಸ್ ಮಾಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸೂಚಿಸಿದ್ದು, ಅದರಂತೆ ಗುರುವಾರ ಉಡುಪಿಯ ಬೋರ್ಡ್ ಹೈಸ್ಕೂಲ್ ನ್ನು, ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಅವರ ನೇತೃತ್ವದಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು.