ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2022 ರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ 18 ರ ವರೆಗೆ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.