ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 4,50,706 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಮೊದಲ ಶ್ರೇಣಿಯಲ್ಲಿ ಪಾಸ್

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ‌ ನೀಡಿದ ಮಾಹಿತಿಯ ವಿವರ ಹೀಗಿದೆ:

ಫ್ರೆಶರ್ಸ್ ಫಲಿತಾಂಶ ತಿರಸ್ಕರಿಸಿ ಮತ್ತೆ ಪರೀಕ್ಷೆ ತೆಗೆದುಕೊಂಡರೆ, ಅವರನ್ನು ಫ್ರೆಶರ್ಸ್ ಎಂದೇ ಪರಿಗಣಿಸಲಾಗುವುದು.

ಫಲಿತಾಂಶದಿಂದ ತೃಪ್ತರಾಗದವರಿಗೆ ಆಗಸ್ಟ್ ತಿಂಗಳಲ್ಲಿ ಮತ್ತೆ ಪರೀಕ್ಷೆ

ಫಲಿತಾಂಶದ ಬಗ್ಗೆ ಅಸಮಾಧಾನ ಇದ್ದವರು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಜುಲೈ 30 ಕಡೇ ದಿನಾಂಕ

2,239 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದಾರೆ.

ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 1,47,594. ಇದರಲ್ಲಿ 14,243 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ಎಲ್ಲಾ ರಿಪೀಟರ್ಸ್‌ಗಳೂ ಪಾಸ್: ಅವರಿಗೆ ಕನಿಷ್ಠ ಉತ್ತೀರ್ಣ ಅಂಕ ನೀಡಲಾಗಿದೆ.

4,50,706 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಮೊದಲ ಶ್ರೇಣಿಯಲ್ಲಿ ಪಾಸ್

ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ದೊರೆಯಲಿದೆ

ವಿದ್ಯಾರ್ಥಿಗಳ ರ‍್ಯಾಂಕ್‌ ಪಟ್ಟಿ ಘೋಷಣೆ ಇಲ್ಲ

ಈ ಬಾರಿ ಪರೀಕ್ಷೆ ಇಲ್ಲದೆ, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ನೀಡಿದ ಅಂಕಗಳ ಆಧಾರದಲ್ಲಿ ಫಲಿತಾಂಶ