ಉಡುಪಿ: ಜೂನ್ 27 ರಿಂದ ಜುಲೈ 4 ರವರೆಗೆ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ 144(1) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.