ಉಡುಪಿ ಜಿಲ್ಲೆಯಲ್ಲಿ ಫೆ.14 ರಿಂದ 19ರ ವರೆಗೆ ಸೆಕ್ಷನ್ 144 ಜಾರಿ; ನಗರದಲ್ಲಿ ಜಿಲ್ಲಾಧಿಕಾರಿ ಘೋಷಣೆ

ಉಡುಪಿ: ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಫೆ.14ರಿಂದ 19ರ ವರೆಗೆ ಎಲ್ಲ ಪ್ರೌಢಶಾಲೆಗಳ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಭಾನುವಾರ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಶಾಲೆಯ ಸುತ್ತಮುತ್ತ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ವಿಯೋತ್ಸವ, ಸಾರ್ವಜನಿಕ ಸಭೆ ಸಮಾರಂಭಕ್ಕೆ ನಿಷೇಧ ಹೇರಲಾಗಿದೆ. ಯಾರ ಪರ- ವಿರುದ್ಧ ಘೋಷಣೆ ಕೂಗುವಂತಿಲ್ಲ.

ಯಾವುದೇ ವ್ಯಕ್ತಿ ಹಾಗೂ ಜಾತಿ ಧರ್ಮದ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.