ಡಿ.ಇಎಲ್.ಇ.ಡಿ, ಡಿ.ಪಿ.ಎಸ್.ಇ ಪರೀಕ್ಷೆ ಹಿನ್ನೆಲೆಯಲ್ಲಿ ನಿಷೇಧಾಜ್ಷೆ ಜಾರಿ

ಉಡುಪಿ: ಜುಲೈ 4 ರಿಂದ 14 ರ ವರೆಗೆ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇ.ಡಿ ಹಾಗೂ
ಡಿ.ಪಿ.ಎಸ್.ಇ ಪರೀಕ್ಷೆಗಳು ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೂ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರದ 200 ಮೀಟರ್ ಪ್ರದೇಶದ
ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.