ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024 ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಗಳು ಜಿಲ್ಲೆಯಲ್ಲಿ ನಿಗದಿಪಡಿಸಿರುವ 17 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 18 ಮತ್ತು 19 ರಂದು ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ
ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಎಲ್ಲಾ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.