ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ: ಭದ್ರತೆ ಹೆಚ್ಚಳ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಮಾಡಿರುವುದು ಬೆಳಕಿಗೆ ಬಂದಿರುವ ಬೆನ್ನಲ್ಲೇ ಅವರಿಗೆ ನೀಡಿದ್ದ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಬೆದರಿಕೆ ಕರೆ ಮಾಡಿದವನು ತನ್ನನ್ನು ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಪರಿಚಯಿಸಿಕೊಂಡಿದ್ದು, ಏಪ್ರಿಲ್ 30 ರಂದು ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಕರೆಯಲ್ಲಿ, ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಗುರುತಿಸಿಕೊಂಡ ವ್ಯಕ್ತಿ ಏಪ್ರಿಲ್ 30 ರಂದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಕರೆ ಬಂದ ಕೂಡಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಬಾಂದ್ರಾ ಮನೆಯ ಹೊರಗೆ ಈಗಾಗಲೇ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ ಎಂದು ವರದಿಯಾಗಿದೆ.