ಉಡುಪಿ: ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಉಡುಪಿ ಜಿಲ್ಲೆಯ ಪದಾಧಿಕಾರಿಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಉಪಾಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಆಯ್ಕೆಯಾಗಿದ್ದರೆ, ಜಿಲ್ಲಾಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಮತ್ತು ಅನಿತಾ ಶ್ರೀಧರ್ ಹಾಗೂ ಜಿಲ್ಲಾ ವಕ್ತಾರರಾಗಿ ಕೆ. ರಾಘವೇಂದ್ರ ಕಿಣಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.