ಡಿ. 5 ರಂದು ಸಮುದ್ರ ತೀರಗಳಲ್ಲಿ ಜೀವ ರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಉಡುಪಿ: ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಬೀಚ್, ಆಸರೆ ಬೀಚ್, ಮಲ್ಪೆ ಬೀಚ್, ಸೈಂಟ್ ಮೇರೀಸ್ ಐಲ್ಯಾಂಡ್, ಕಾಪು ಬೀಚ್ ಹಾಗೂ ಪಡುಬಿದ್ರಿ ಮುಖ್ಯ ಬೀಚ್‌ಗಳಲ್ಲಿ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲು ಉದ್ದೇಶಿಸಲಾಗಿದ್ದು, ಪ್ರವಾಸೋದ್ಯಮ ಇಲಾಖೆಯ ವತಿಯಿಂದ 20 ಜನರಿಗೆ ಜೀವ ರಕ್ಷಕ ತರಬೇತಿ ನೀಡಿ, ಉದ್ಯೋಗಾವಕಾಶ ಕಲ್ಪಿಸಲಾಗುವುದು.

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮುಂಚಿತವಾಗಿ ಡಿಸೆಂಬರ್ 5 ರಂದು ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಈಜುಕೊಳ ಇಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು. ಆಸಕ್ತ ಕನಿಷ್ಟ 18 ರಿಂದ 35 ವರ್ಷದೊಳಗಿನ, 1 ಕಿ.ಮೀ ಓಟ ಮತ್ತು 400 ಮೀ ಈಜಲು ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾದೊಂದಿಗೆ ಅಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ಒಳಗೆ ಹಾಜರಾಗಿ ನೊಂದಾಯಿಸಿಕೊಂಡು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ 303, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.