ಹೆಬ್ರಿ: ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ನಡೆಯುವ ‘ವಾಯ್ಸ್ ಆಫ್ ಚಾಣಕ್ಯ-2023’ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆಯು ಹೆಬ್ರಿ ಸರಕಾರಿ ಪ್ರೌಢಶಾಲೆಯ ಸಹಕಾರದೊಂದಿಗೆ ನ.19 ರಂದು ಬೆಳಿಗ್ಗೆ 10 ಗಂಟೆಗೆ ಹೆಬ್ರಿ ಸರಕಾರಿ ಪ.ಪೂ.ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಉಡುಪಿ,ದ.ಕ ಹಾಗೂ ಶಿವಮೊಗ್ಗ ಜಿಲ್ಲೆಯವರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.