ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರಾತ, ಮರಾಠ, ಅರೆ ಕ್ಷತ್ರಿ, ಅರೆ ಮರಾಠ, ರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ, ಕ್ಷತ್ರಿಯ ಮರಾಠ ಹಾಗೂ ಕುಳವಾಡಿ ಜನರ ಆರ್ಥಿಕ ಅಭಿವೃದ್ಧಿಗಾಗಿ ಶ್ರೀ ಶಹಜೀರಾಜೇ ಸಮೃದ್ಧಿ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ) ಯೋಜನೆಯಡಿ ಸುವಿಧಾ ತಂತ್ರಾಂಶ https://suvidha.karnataka.gov.in ರಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ ಪೋರ್ಟಲ್ https://www.kaushalkar.com ರಲ್ಲಿ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.