ವಿಕಲಚೇತನರಿಗೆ ಆಧಾರ ಸ್ವ- ಉದ್ಯೋಗ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಆಧಾರ ಸ್ವ-ಉದ್ಯೋಗ ಯೋಜನೆಯಡಿ ಲಾಭದಾಯಕ ಸ್ವ-ಉದ್ಯೋಗ ಕೈಗೊಳ್ಳಲು 1 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಜಾತಿಯವರಿಗೆ ಶೇಕಡ 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇಕಡ 50 ರಷ್ಟು ಸಬ್ಸಿಡಿ ಒದಗಿಸಲಾಗುವುದು.

ಬಿ.ಪಿ.ಎಲ್ ಕಾರ್ಡ್ ಹೊಂದಿರುವ, 18 ರಿಂದ 55 ವರ್ಷದೊಳಗಿನ ವಿಕಲಚೇತನರು ಫೆಬ್ರವರಿ 16 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಇಲಾಖೆಯ ದೂರವಾಣಿ ಸಂಖ್ಯೆ: 0820-2574810 / 811 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.