ಉಡುಪಿ: ಇಲ್ಲಿನ ಕುಂಜಿಬೆಟ್ಟಿನ ವಸತಿಗೃಹವೊಂದರ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹30 ಸಾವಿರ ಮೌಲ್ಯದ 1050 ಗ್ರಾಂ ತೂಕ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಕೆ.ಎಸ್. ಗೌತಮ್ ಗೌಡ (23), ವಿಕ್ಕಿ ದಯಾಳ್ ಯಾನೆ ವಿಕ್ಕಿ (21) ಎಂದು ಗುರುತಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.