ಉಡುಪಿ: ಇಲ್ಲಿನ ಉನ್ನತಿ ಕರಿಯರ್ ಅಕಾಡೆಮಿಯಲ್ಲಿ ಮೇ 2, 2022 ರಂದು ಬೆಳಿಗ್ಗೆ 10 ಘಂಟೆಯಿಂದ 11ರ ತನಕ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಹಾಗೂ ಐಟಿ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶಗಳು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಸುಯೋಗ್ ಶೆಟ್ಟಿ-ಸಿಇಓ, ನೀವಿಯಸ್ ಸೊಲ್ಯೂಷನ್ಸ್ ಭಾಗವಹಿಸಲಿದ್ದಾರೆ. ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಶ್ರೀಮತಿ ಪೌರ್ಣಮಿ ಪ್ರೇಮ್ ಶೆಟ್ಟಿ ಉಪಸ್ಥಿತರಿರುವರು. ಜಿಲ್ಲೆಯ ವಿವಿಧ ಕಾಲೇಜುಗಳ ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳು ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ.
ಭಾಗವಹಿಸಲು ಆಸಕ್ತರಾಗಿರುವ ಅಭ್ಯರ್ಥಿಗಳು https://forms.gle/RvriuEsJnKMA832i7 ನಲ್ಲಿ ನೋಂದಣಿ ಮಾಡಬಹುದು.