ಸ್ಕೂಟರ್ ಅಪಘಾತ: ಹಿರಿಯ ನಾಗರಿಕರಿಗೆ ಮೂಳೆ ಮುರಿತ

ಉಡುಪಿ: ತೆಂಕಪೇಟೆ ನಿವಾಸಿ ರವೀಂದ್ರ ಭಟ್ (63) ಎನ್ನುವವರು ಸೆಪ್ಟೆಂಬರ್ 08 ರಂದು ತನ್ನ ಸ್ಕೂಟರ್ ನಲ್ಲಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ತೆರಳಿದ್ದು, ಮರಳಿ ತನ್ನ ಮನೆಗೆ ಹೋಗುವಾಗ ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಅಜ್ಜರಕಾಡು ಆಸ್ಪತ್ರೆಯ ಮುಂಭಾಗದ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಜೋಡುಕಟ್ಟೆ ಕಡೆಯಿಂದ ಬ್ರಹ್ಮಗಿರಿ ಕಡೆಗೆ ಬರುತ್ತಿದ್ದ ಮೋಟಾರ್ ಸೈಕಲ್ ಸವಾರರೊಬ್ಬರು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ರವೀಂದ್ರ ಭಟ್ ಸವಾರಿ ಮಾಡುತ್ತಿದ್ದ ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ, ರವೀಂದ್ರ ಭಟ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಬಲಕಾಲಿಗೆ ಮೂಳೆ ಮುರಿತದ ಗಂಭೀರ ಸ್ವರೂಪದ ಗಾಯವಾಗಿದ್ದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆ ಮಣಿಪಾಲಕ್ಕೆ ದಾಖಲಾಗಿರುತ್ತಾರೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ .