ಉಡುಪಿ: ಹಿರಿಯ ಕಾಂಗ್ರೆಸ್ ಮುಖಂಡ ಹಾಜಿ ಕೆ.ಆತ್ರಾಡಿ ಇದಿನಬ್ಬ(72) ಅಲ್ಪಕಾಲದ ಅಸೌಖ್ಯದಿಂದ ಇಂದು ನಸುಕಿನ ವೇಳೆ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ಇವರು ಒಬ್ಬರು. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ, ಉಡುಪಿ ತಾಲೂಕು ಆಶ್ರಯ ಸಮಿತಿಯ ಸದಸ್ಯರಾಗಿ ಹಾಗೂ ಆತ್ರಾಡಿ ಜುಮ್ಮಾ ಮಸೀದಿಯ ಉಪಾಧ್ಯಕ್ಷರಾಗಿ ಇವರು ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಯುಆರ್ ಸಭಾಪತಿ, ಕಾಂಗ್ರೆಸ್ ಉಡುಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ಕೆಪಿಸಿಸಿ ಸಂಯೋಜಕ ಉಳ್ಳಾಲ ಬ್ಲಾಕ್ ಉಸ್ತುವಾರಿ ಹಬೀಬ್ ಅಲಿ ಸಂತಾಪ ಸೂಚಿಸಿದ್ದಾರೆ.