ಉಡುಪಿ: ಹಿರಿಯ ಸಾಹಿತಿ, ಪತ್ರಕರ್ತ, ನಾಡೋಜ ಪಾಟೀಲ ಪುಟ್ಟಪ್ಪ (101) ಅವರು ವಯೋಸಹಜ ಅನಾರೋಗ್ಯದಿಂದಾಗಿ ಇಂದು ರಾತ್ರಿ ಹುಬ್ಬಳಿಯ ಕೀಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪಾಪು, ಕಳೆದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಾಪು ಅವರು ವಿದೇಶದಲ್ಲಿ ಪತ್ರಿಕೋದ್ಯಮ ಪದವಿ ಪಡೆದು, ಸ್ವಂತ ಪತ್ರಿಕೆಯನ್ನು ಆರಂಭಿಸಿದ್ದರು. ಹಲವಾರು ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.