ಉಡುಪಿ: ಅಮೃತ್, ಎ.ಡಿ.ಬಿ. ಅನುದಾನದ ನೆರವಿನಲ್ಲಿ ಟ್ರಾಂಚ್-2 ಯೋಜನೆಯಡಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮತ್ತು ಸದರಿ ಯೋಜನೆಗಳ ಅನುಷ್ಠಾನದಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅಭಿಪ್ರಾಯ ಪಡೆಯುವ ಉದ್ದೇಶದಿಂದ ಸೆಪ್ಟಂಬರ್ 21 ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲ ಆರ್.ಎಸ್.ಬಿ ಸಭಾಭವನದಲ್ಲಿ ಸರಳೆಬೆಟ್ಟು(14) ಮತ್ತು ಈಶ್ವರನಗರ (17) ವಾರ್ಡ್‍ಗಳ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಏUIಆಈಅ, ಯೋಜನಾ ಅನುಷ್ಠಾನ ಘಟಕ ಮತ್ತು ಉಡುಪಿ ನಗರಸಭೆಯ ಸಹಯೋಗದೊಂದಿಗೆ ಆಯೋಜಿಸಿದ್ದು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಹಾಜರಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.