ಉಡುಪಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ದಿನಾಂಕ:31-03-2023 ರ ಮೊದಲು ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಪೈಕಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ದ್ವಿತಿಯ ಪಿಯುಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಕಾರ್ಮಿಕ ಅಧಿಕಾರಿ, ಉಡುಪಿ ಉಪವಿಭಾಗ, ಇವರ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ
ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು
ತಾವು ನೋಂದಣಿ ಮಾಡಿದ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ
ಅರ್ಜಿಯನ್ನು ಅದೇ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 22 ರಂದು ಸಂಜೆ 5:30 ಗಂಟೆ ಕೊನೆಯ ದಿನಾಂಕವಾಗದಿದು, ತದನಂತರ ಯಾವುದೇ
ಮೂಲದಿಂದ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ
ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಯವರ ಕಛೇರಿ, ಉಡುಪಿ ಜಿಲ್ಲೆ ಅನ್ನು
ಸಂರ್ಪಕಿಸಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.












