ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರು ಸೆಪ್ಟಂಬರ್ 24 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ಸಮೀಪದ ಮಥುರ ಛತ್ರ ಇಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಶಿಕ್ಷಣ ವರ್ಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.