ಸೆ.26, 27: ಬ್ಯಾಂಕ್ ವಿಲೀನ ವಿರೋಧಿಸಿ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಮುಷ್ಕರ

ನವದೆಹಲಿ: ದೇಶದ ಹತ್ತು ಪ್ರಮುಖ ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ  ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಲು ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಮುಷ್ಕರಕ್ಕೆ ಕರೆ ನೀಡಿವೆ.

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆಯ ವತಿಯಿಂದ  ಸೆ. 26, 27 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕಿಗೆ ಸಾಲು ಸಾಲು ರಜೆ, ಬ್ಯಾಂಕ್ ವಿಲೀನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಕೇಂದ್ರ ಸರ್ಕಾರವು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ ತಿಂಗಳ ಎರಡನೇ ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದೀಪಲ್ ಕುಮಾರ್ ಶರ್ಮಾ ಘೋಷಿಸಿದ್ದಾರೆ.