ಉಡುಪಿ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದಡಿ 80 ಬಡಗುಬೆಟ್ಟು ಹಾಗೂ ಹಿರಿಯಡ್ಕ ಮಹಾ ಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಭಾನುವಾರ ಹಿರಿಯಡ್ಕದ ಗಣೇಶ ಕಲಾ ಮಂದಿರದಲ್ಲಿ ನಡೆಯಿತು.
ಸೂರ್ಯಕಲಾ ಅಂಜಾರು ಮಠ ವಂದೇಮಾತರಂ ಗೀತೆ ಹಾಡಿ ಕಾರ್ಯಕ್ರಮ ಪ್ರಾರಂಭಿಸಿದರು.
ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.
ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದಿ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಹಿರಿಯಡ್ಕ-ಪೆರ್ಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ರಾಜ್ಯ ಫಲಾನುಭವಿ ಪ್ರಕೋಷ್ಟದ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಅತ್ರಾಡಿ ಕಾಪು, ಮಂಡಲ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಮಾಂಬೆಟ್ಟು ಗೋಪಾಲಕೃಷ್ಣ ರಾವ್, ಜಿಲ್ಲಾ ಕಾರ್ಯದರ್ಶಿ ಸುನಿತಾ ನಾಯ್ಕ್, ಬಡಗುಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಂದೀಪ್ ಶೆಟ್ಟಿ, ಮಂಡಲ ಉಪಾಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾ ಕೆ ಡಿ ಪಿ ಸದಸ್ಯೆ &ಪ್ರಭುದ್ದರ ಪ್ರಕೊಷ್ಟ ಸದಸ್ಯೆ ನೀರಜಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸತ್ಯಾನಂದ ನಾಯಕ್ ಅತ್ರಾಡಿ ಕಾರ್ಯಕ್ರಮ ನಿರೂಪಿಸಿದರು, ಕೊಡಿಬೆಟ್ಟು ಪಂಚಾಯತ್ ಉಪಾಧ್ಯಕ್ಷ ಸದಾನಂದ ಪ್ರಭು ಸ್ವಾಗತಿಸಿದರು.