ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಹೊಸಕೋಟೆ ರಸ್ತೆಯಲ್ಲಿ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.
ಸಾವನ್ನಪ್ಪಿರುವ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಮಹಿಳೆಯನ್ನು ಕೊಲೆ ಮಾಡಿ ಬಳಿಕ ಪೆಟ್ರೊಲ್ ಸುರಿದು ಬೆಂಕಿಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಗ್ರಾಮಸ್ಥರು ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.