ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.dbcdc.karnataka.gov.in, ದೂ.ಸಂಖ್ಯೆ: 080-22374832, 8050770004, 7090400100 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ