ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೂವರ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಜವಾದ್, ಶಹೀದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಎಂಬ ಮೂವರನ್ನು ಬಂಧಿಸಿದ್ದಾರೆ.

2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ಆರು ಮಂದಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಸೆ.4ರಂದು ಬಾಲಕ ನೀಡಿದ ದೂರಿನ ಆಧಾರದಲ್ಲಿ ಆರು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿವೆ.

ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.