ಉಡುಪಿ: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ನ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶಾರದಾಕೃಷ್ಣ’ ಪ್ರಶಸ್ತಿಗೆ ಈ ಬಾರಿ ಶಿಕ್ಷಕ, ಸಂಘಟಕ ಹಾಗೂ ಕಲಾವಿದ ಉಡುಪಿಯ ಮುರಳಿ ಕಡೆಕಾರ್ ಅವರು ಆಯ್ಕೆಯಾಗಿದ್ದಾರೆ.
ಜ. 23ರಂದು ಸಂಜೆ 5 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿರುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಪ್ರಶಸ್ತಿ ಪತ್ರ, ಫಲಕ ಹಾಗೂ ₹50 ಸಾವಿರ ಗೌರವಧನ ಒಳಗೊಂಡಿದೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭದ ವಿವರಗಳನ್ನು ಪ್ರಕಟಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷೆ ಡಾ. ಭಾರ್ಗವಿ ಐತಾಳ್ ಹಾಗೂ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ನ ಮುಖ್ಯಸ್ಥ ವಾಸುದೇವ ಅಡಿಗ ಉಪಸ್ಥಿತರಿದ್ದರು.















