ಕಡಿಯಾಳಿ ದೇಗುಲದಲ್ಲಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ” ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ

ಉಡುಪಿ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಾ. ವಿದ್ಯಾಭೂಷಣ ಕಂಠಸಿರಿಯಲ್ಲಿ ಹೊರಬಂದಿರುವ ಜಗನ್ಮಾತೆ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ “ಎಂಬ ಹಾಡಿನ ಗುಚ್ಛಗಳನ್ನು ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಯೂಟ್ಯೂನಲ್ಲಿ ಬಿಡುಗಡೆ ಮಾಡಲಾಯಿತು.

ಶಾಸಕ ಕೆ ರಘುಪತಿ ಭಟ್ ಹಾಡನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ನಿತ್ಯಾನಂದ ಕಾಮತ್, ನಗರಸಭಾ ಸದಸ್ಯರಾದ ಗಿರೀಶ್ ಎಂ ಅಂಚನ್, ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ರಮೇಶ್ ಸೇರಿಗಾರ್ ಹಾಗೂ ಮಂಜುನಾಥ್ ಹೆಬ್ಬಾರ್ ಉಪಸ್ಥಿತರಿದ್ದರು.