ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊಡಲಾಗುತ್ತಿರುವ ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಕುಮಾರಿ ಶ್ರಾವಣಿ ಭಟ್ ಪಡೆದಿರುತ್ತಾರೆ. ಇವಳು ಬೈಲೂರು ಸ್ಮಿತಾ ಮತ್ತು ಕೃಷ್ಣರಾಜ ಭಟ್ ದಂಪತಿಗಳ ಪುತ್ರಿ.