ಶಿರಾ: ಶಿರಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಚುರುಕುಗೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಜೆಡಿಎಸ್‌ನಿಂದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ, ಕಾಂಗ್ರೆಸ್‌ನಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಬಿಜೆಪಿಯಿಂದ ರಾಜೇಶ್‌ಗೌಡ ಸ್ಪರ್ಧಿಸಿದ್ದಾರೆ.
ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ
ಶಿರಾ ಉಪಚುನಾವಣೆ ನಾಲ್ಕನೇ ಸುತ್ತಿನಲ್ಲಿಯೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ: 11,645
ಕಾಂಗ್ರೆಸ್:10,141
ಜೆಡಿಎಸ್: 6259
1504 ಮತಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.