ಅಜೆಕಾರು: ಶಿರ್ಲಾಲು ಗ್ರಾಮ ಪಂಚಾಯತ್ ನ ಪ್ರಥಮ ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ.
ಸಭೆಯಲ್ಲಿ ಮುಂಡ್ಲಿ ಗ್ರಾಮದ ಮಹಿಳೆಯೊಬ್ಬರು ಕುಡಿಯುವ ನೀರು ಒದಗಿಸುವಂತೆ ಮನವಿ ಮಾಡಿದರು. ಇದಕ್ಕೆ ಪಂಚಾಯತ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಗ್ರಾಮಸ್ಥರ ಮಧ್ಯೆ ಎರಡು ಗುಂಪುಗಳಾಗಿ ಮಾರ್ಪಟ್ಟಿದ್ದು, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬಳಿಕ ಗಲಾಟೆ ಅಜೆಕಾರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಗಲಾಟೆಯಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.