ಬೈಂದೂರು: ಮಾವಿನ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ.
ಶಿರೂರು ಗ್ರಾಮದಲ್ಲಿ 15ವರ್ಷದ ಬಾತ್ಯಾ ನೌಮನ್ ಮೃತದುರ್ದೈವಿ. ಈತ ಮಾ.12ರಂದು ಮನೆಯ ಬಳಿ ಮಾವಿನ ಕಾಯಿ ತೆಗೆಯಲು ಮಾವಿನ ಮರದ ಹತ್ತಿದ್ದನು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ಆತನನ್ನು ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದ ನೌಮನ್ ಮಾ. 27ರಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.