ಶಿರ್ವ: ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಹಸ್ತಾಂತರ ಸಮಾವೇಶ

ಶಿರ್ವ: ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಕಳತ್ತೂರು ಗುರ್ಮೆ ಸುರೇಶ್ ಶೆಟ್ಟಿ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಾಶಕ್ತಿಕೇಂದ್ರದ ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ನೀಡಲಾಯಿತು.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬೂತ್ ಅಧ್ಯಕ್ಷರ ಜವಾಬ್ದಾರಿ ಮತ್ತು ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದರು.

ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಮಾತನಾಡಿ, ಬೂತ್ ಅಧ್ಯಕ್ಷರ ಜವಾಬ್ದಾರಿ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು.

ಮಹಾಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ರಾವ್ ಮಜೂರು ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.
ಸಮಾವೇಶದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ , ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ರಾಜ್ಯ ಮಹಿಳಾಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕ್ಷೇತ್ರದ ನಿಕಟ ಪೂರ್ವ ಅಧ್ಯಕ್ಷರು ಪ್ರಕಾಶ್ ಶೆಟ್ಟಿ, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಪ್ರವೀಣ್ ಗುರ್ಮೆ ,ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಉಪಸ್ಥಿತರಿದ್ದರು .

ಕಾಪು ಮಂಡಲದ ಕಾರ್ಯದರ್ಶಿ, ಕುತ್ಯಾರು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಲತಾ ಅಚಾರ್ಯ ಸ್ವಾಗತಿಸಿದರು.ಶಿರ್ವ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಬೂತ್ ಅಧ್ಯಕ್ಷರುಗಳು ,ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.