ಶಿರ್ವ: ಸಾಫ್ಟ್ ವೇರ್ ಉದ್ಯಮಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವದಲ್ಲಿ ನಡೆದಿದೆ.
ಮೃತರನ್ನು ಉದ್ಯಮಿ ಶಿರ್ವ ನಿವಾಸಿ ಸೈಮನ್ ಡಿಸೋಜ (57) ಎಂದು ಗುರುತಿಸಲಾಗಿದೆ. ಇವರು ಸುಮಾರು 25 ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಸಾಫ್ಟ್ ವೇರ್ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಊರಿಗೆ ಆಗಮಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರು ಸೋಮವಾರ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.