ಶಿರ್ವ: ಗ್ರಾಮ ಒನ್ ಕೇಂದ್ರ ಉದ್ಘಾಟನೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆಯು ಶಿರ್ವ ಗ್ರಾಮದ ವ್ಯಾಪ್ತಿಯಲ್ಲಿ ಉದ್ಘಾಟನೆಗೊಂಡಿತು. 750ಕ್ಕೂ ಹೆಚ್ಚಿನ ಸೇವೆಗಳನ್ನು ಒಳಗೊಂಡ ಗ್ರಾಮ ಒನ್ ಕೇಂದ್ರವಾಗಿದ್ದು, ಆಧಾರ್ , ಇ-ಸ್ಟ್ಯಾಂಪ್ ಹಾಗೂ ಸೇವಾ ಸಿಂಧುವಿನ ಎಲ್ಲ ಸೇವೆಗಳನ್ನು ಗ್ರಾಮೀಣ ಭಾಗದ ನಾಗರಿಕರಿಗೆ ಹಲವು ಸೇವೆಗಳನ್ನು ಒದಗಿಸುವ ಸೇವಾ ವೇದಿಕೆ ಇದಾಗಿರುತ್ತದೆ.

ಕಾರ್ಯಕ್ರಮವನ್ನು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ.ಆರ್.ಪಾಟ್ಕರ್ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಶಿರ್ವ ಗ್ರಾಮ ಪಂಚಾಯತ್ ಲೆಕ್ಕಾಧಿಕಾರಿ ವಿಜಯ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ಕಟ್ಟಡ ಮಾಲೀಕರಾದ ಸ್ಟಾನ್ಲಿ ಡಯಾಸ್, ರವಿರಾಜ್ ಸಾಲ್ಯಾನ್ ಮಲ್ಪೆ, ಹಿರಿಯ ವಿ.ಎಲ್. ಇ. ಉಡುಪಿ, ಗ್ರಾಮ ಒನ್ ಕೇಂದ್ರದ ವ್ಯವಸ್ಥಾಪಕರಾದ ಪ್ರಜ್ವಲ್ ಬಿ. ಕುಲಾಲ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.